Kota Shivarama Karanth > Quotes > Quote > Dhanushree liked it

Kota Shivarama Karanth
“ಭೂಮಿಯಲ್ಲಿ ಹುಟ್ಟಿದ ಎಲ್ಲರೂ ಒಟ್ಟುಗೂಡಿ ಒಂದು ದೇವರನ್ನು ಮಾಡಿಕೊಂಡಿದ್ದಾರೆ. ಅವನೇನು ಮಾಡುತ್ತಿದ್ದಾನೋ? ಯಾರ್ಯಾರು ನನ್ನನ್ನು ನಂಬುತ್ತಿದ್ದಾರೆ, ಯಾರ್ಯಾರು ನಂಬುವುದಿಲ್ಲ ಎಂದು ಹುಡುಕಿ ಹೋಗಲಾರ . ಅವನ ಚಿಂತೆಯೇ ಇಲ್ಲದ ಪ್ರಾಣಿಗಳಿಲ್ಲವೋ? ಅವುಗಳನ್ನೂ ಬದುಕಿಸಿ ಇರಿಸಿದ್ದಾನಲ್ಲ . ಅವನನ್ನು ತಿಳಿಯಬೇಕಾದರೆ ನಾವು ಅವನನ್ನು ಹುಡುಕಿದ ಹಾಗೆ ಅವನೂ ನಮ್ಮನ್ನು ಹುಡುಕಿಕೊಂಡು ಬರಬೇಕಾದುದು ಇಲ್ಲ . ನಾವೇ ಅವನಲ್ಲಿ ಪ್ರಶ್ನೆ ಕೇಳುತ್ತೇವೆ. ನಾವೇ ಅವಕ್ಕೆ ಉತ್ತರವನ್ನು ಹೇಳಿಕೊಳ್ಳುತ್ತೇವೆ. ನಮಗೆ ಇಷ್ಟ ಕಂಡಂತೆ ನಡೆದಾಗ ದೇವರ ಇಚ್ಛೆ ಅನ್ನುತ್ತೇವೆ . ಅನಿಷ್ಟ ಪ್ರಾಪ್ತಿಸಿದಾಗ ಅನಿಷ್ಟ ಎನ್ನುತ್ತೇವೆ. ದೇವರು (?) ಕೊಟ್ಟ ಆಯುಷ್ಯವನ್ನು ಇದ್ದಷ್ಟು ಕಾಲ ಎಲ್ಲರ ಜೊತೆ ಒಳ್ಳೆಯ ರೀತಿಯಿಂದ ಬಾಳಿ ಬದುಕುವುದೇ ಪೂಜೆ ಎಂಬ ಬುಧ್ಧಿ ಯಾಕೆ ಬರಬಾರದು ನಮಗೆ?”
Kota Shivarama Karanth, ಮೂಕಜ್ಜಿಯ ಕನಸುಗಳು [Mookajjiya Kanasugalu]

No comments have been added yet.